ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ- ಡಾ.ಗೋವಿಂದ ಬಾಬು ಪೂಜಾರಿ

Share

Advertisement
Advertisement
Advertisement

ಕುಂದಾಪುರ:ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ.ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಗ್ಗಟ್ಟು ಇರುವಲ್ಲಿ ಸಂಘಟನೆಯ ಯಶಸ್ಸು ಸಾಧ್ಯವಾಗುತ್ತದೆ,ಸಮಾಜಮುಖಿ ಕಾರ್ಯಕ್ರಮಗಳು ಸಂಸ್ಥೆಯ ಹೆಸರನ್ನು ಶಾಶ್ವತವಾಗಿಸುತ್ತದೆ ಎಂದರು.
ಜಿ.ಪಂ ಮಾಜಿ ಸದಸ್ಯೆ ಸಾಧು ಬಿಲ್ಲವ,ನಿವೃತ್ತ ವಾಯು ಸೇನಾ ಸೈನಿಕ ಮಂಜುನಾಥ ಪೂಜಾರಿ ಕೋಟೇಶ್ವರ,ಮತ್ಸೋದ್ಯಮಿ ಸಂಜೀವ ಬಿಲ್ಲವ ಉಪಸ್ಥಿತರಿದ್ದರು.ಡಾ.ಗೋವಿಂದ ಬಾಉ ಪೂಜಾರಿ ಮತ್ತು ಮಂಜುನಾಥ ಪೂಜಾರಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಜಿ.ಆರ್ ಲಕ್ಷ್ಮಣ ಪೂಜಾರಿ ಸ್ವಾಗತಿಸಿದರು.ಗಣೇಶ್ ಪೂಜಾರಿ ವರದಿ ವಾಚಿಸಿದರು.ಉಪನ್ಯಾಸ ನರೇಂದ್ರ ಎಸ್ ಗಂಗೊಳ್ಳಿ ನಿರೂಪಿಸಿದರು.ಆಕಾಶ್ ಪೂಜಾರಿ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page