ಕುಂದಾಪುರ:ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ.ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಗ್ಗಟ್ಟು ಇರುವಲ್ಲಿ ಸಂಘಟನೆಯ ಯಶಸ್ಸು ಸಾಧ್ಯವಾಗುತ್ತದೆ,ಸಮಾಜಮುಖಿ ಕಾರ್ಯಕ್ರಮಗಳು ಸಂಸ್ಥೆಯ ಹೆಸರನ್ನು ಶಾಶ್ವತವಾಗಿಸುತ್ತದೆ ಎಂದರು.
ಜಿ.ಪಂ ಮಾಜಿ ಸದಸ್ಯೆ ಸಾಧು ಬಿಲ್ಲವ,ನಿವೃತ್ತ ವಾಯು ಸೇನಾ ಸೈನಿಕ ಮಂಜುನಾಥ ಪೂಜಾರಿ ಕೋಟೇಶ್ವರ,ಮತ್ಸೋದ್ಯಮಿ ಸಂಜೀವ ಬಿಲ್ಲವ ಉಪಸ್ಥಿತರಿದ್ದರು.ಡಾ.ಗೋವಿಂದ ಬಾಉ ಪೂಜಾರಿ ಮತ್ತು ಮಂಜುನಾಥ ಪೂಜಾರಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಜಿ.ಆರ್ ಲಕ್ಷ್ಮಣ ಪೂಜಾರಿ ಸ್ವಾಗತಿಸಿದರು.ಗಣೇಶ್ ಪೂಜಾರಿ ವರದಿ ವಾಚಿಸಿದರು.ಉಪನ್ಯಾಸ ನರೇಂದ್ರ ಎಸ್ ಗಂಗೊಳ್ಳಿ ನಿರೂಪಿಸಿದರು.ಆಕಾಶ್ ಪೂಜಾರಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…