ಕುಂದಾಪುರ:ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾಯಕ ಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೋಡು ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕು.ಪ್ರಾಮಾಣೆಕ ಸೇವೆಯನ್ನು ಸಮಾಜ ಗುರುತಿಸುತ್ತದೆ,ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು.
ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಛೇರಿ ಸಿಬ್ಬಂದಿ ಸುರೇಶ ಖಾರ್ವಿ ಅವರಿಗೆ ಕಾಯಕ ಯೋಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಕೆ.ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಡಾ.ಸೋನಿ ಡಿ’ಕೊಸ್ಟ,ಜೆಸಿಐ ಉಪ್ಪುಂದದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಉಪಸ್ಧಿತರಿದ್ದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು.ಎನ್.ಎಸ್.ಎಸ್. ಸಹಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಾರ್ಷಿಕ ವರದಿ ವಾಚಿಸಿದರು.ವಿದ್ಯಾರ್ಥಿನಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್.ಸ್ವಯಂಸೇವಕರು ಪ್ರಾರ್ಥಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…