ಕುಂದಾಪುರ:ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೆಪಾಲು –ಮುದ್ಗಮ್ಮಿ ಎಂಬಲ್ಲಿ ಇದ್ದ ಅಪಾಯಕಾರಿ ಮರದ ಕಾಲು ಸಂಕಕ್ಕೆ ಮುಕ್ತಿ ನೀಡಿ ನರೇಗಾ ಯೋಜನೆಯಡಿ ಹೊಸ ಕಾಲುಸಂಕವನ್ನು ನಿರ್ಮಾಣ ಮಾಡಲಾಗಿದೆ.ಸುಸಜ್ಜಿತವಾದ ಕಾಂಕ್ರಿಟ್ ಕಾಲು ಸಂಕ ನಿರ್ಮಾಣವಾಗಿರುವುದರಿಂದ ಅಲ್ಲಿನ ನಿವಾಸಿಗಳಿಗೆ ಸರಾಗವಾಗಿ ಸಂಚಾರ ಮಾಡಬಹುದಾಗಿದೆ.
ಜಡ್ಕಲ್ ಕೊಡೆಪಾಲು –ಮುದ್ಗಮ್ಮಿ ಪರಿಸರದಲ್ಲಿ ಕಾಲು ಸಂಕ ನಿರ್ಮಾಣದಿಂದ ಶಾಲಾ ಮಕ್ಕಳಿಗೆ ಹಾಗೂ ಪರಿಸರದ ಸುಮಾರು 25 ಮನೆಗಳಿಗೆ ಅನುಕೂಲವಾಗಲಿದ್ದು ನಿವಾಸಿಗಳ ಮೊಗದಲ್ಲಿ ಮಂದಹಾಸ ಮೂಡಿದೆ.ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು,ಬೈಂದೂರು ತಾ.ಪಂ ಸಹಾಯಕ ನಿರ್ದೇಶಕರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಲು ಸಂಕ ನಿರ್ಮಾಣಕ್ಕೆ ಕಾಳಜಿ:ಗ್ರಾಮೀಣ ಭಾಗದ ಪರಿಸರದಲ್ಲಿ ಕಾಲು ಸಂಕಗಳನ್ನು ನಿರ್ಮಿಸುವಲ್ಲಿ ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಅವರು ವಿಶೇಷವಾದ ಮುತುವರ್ಜಿಯನ್ನು ವಹಿಸಿದ್ದಾರೆ.ಜಡ್ಕಲ್ ಗ್ರಾಮವೊಂದರಲ್ಲೆ ನರೇಗಾ ಯೋಜನೆಯಡಿ 5 ಕಾಲು ಸಂಕಗಳು ನಿರ್ಮಾಣಗೊಂಡಿವೆ.
(ಜಡ್ಕಲ್ ಕೊಡೆಪಾಲು-ಮುದ್ಗಮ್ಮಿ ಪರಿಸರದಲ್ಲಿದ್ದ ಮರದ ಹಳೆ ಕಾಲು ಸಂಕ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…