ಮಂಗಳೂರು:ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿ ತಮ್ಮಯ್ಯ ಗೌಡ (43) ಎನ್ನುವ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ತಮ್ಮಯ್ಯ ಎನ್ನುವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು ಅವರಿಗಾಗಿ ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಕೆರೆಗೆ ಬಿದ್ದಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…