ಮಂಗಳೂರು:ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದಿದ್ದ ಪರಿಣಾಮ ಮನೆ ಜಖಂಗೊಂಡಿದ್ದು, ಮನೆಯೊಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ-ಸಾರಡ್ಕ ಕೂರೇಲು ಎಂಬಲ್ಲಿ ನಡೆದಿದೆ.
ಕೂರೇಲು ಮಧ್ಯದ ಅಂಗಡಿಯ ಸಮೀಪ ಹಾದು ಹೋಗಿರುವ ರಸ್ತೆಯ ಕೆಳಗಿರುವ ಮನೆಯೊಂದರ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಬಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ.ಮನೆಯಲ್ಲಿರುವ ಮಹಿಳೆ ಮಲಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ,ಅಪಘಾತದಲ್ಲಿ ಗಾಯಗೊಂಡ ಮಹಿಳೆ ಗಂಭೀರ ಪರಿಸ್ಥಿಯಲಿದ್ದಾರೆ. ವಿಟ್ಲ ಪೊಲೀಸರು,ತುರ್ತು ಸೇವಾ ವಾಹನ ಘಟನೆಯ ಸ್ಥಳದಲ್ಲಿ ಹಾಜರಿದ್ದು ಪರಿಸ್ಥಿತಿಯನ್ನು ಅವಲೋಕಿಸಿದರು,ಕ್ರೇನ್ ಬಳಸಿ ವಾಹನವನ್ನು ಮೇಲಕ್ಕೆ ಎತ್ತಲಾಯಿತು.
(ಮನೆ ಮೇಲೆ ಬಿದ್ದ ಪಿಕಪ್ ವಾಹನವನ್ನು,ಎತ್ತುತ್ತಿರುವ ದೃಶ್ಯ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…