ಕುಂದಾಪುರ

ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

Share

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ಪ್ರಾಯೋಜಿತ ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಗಂಗೊಳ್ಳಿ ಸ.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಕವಿತಾ ಎಂ.ಸಿ. ಕಾರ್ಯಕ್ರಮ ಉದ್ಘಾಟಿಸಿದರು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ,ಝೋನಲ್ ರೋಟರ್ಯಾಕ್ಟ್ ಕೋ-ಆರ್ಡಿನೇಟರ್ ಸುಗುಣಾ ಆರ್.ಕೆ ಮತ್ತು ರೋಟರ್ಯಾಕ್ಟ್ ಪದಾಧಿಕಾರಿಗಳು,ನಿರ್ಗಮಿತ ಅಧ್ಯಕ್ಷೆ ಶ್ರೇಯಾ ಎಸ್ ಮತ್ತು ಕಾರ್ಯದರ್ಶಿ ಸುಹಾನಾ,ಸದಸ್ಯರು ಉಪಸ್ಥಿತರಿದ್ದರು.
ರೋಟರ್ಯಾಕ್ಟ್ ಕ್ಲಬಿನ ನೂತನ ಅಧ್ಯಕ್ಷೆಯಾಗಿ ಸಿಂಚನಾ ಮತ್ತು ಕಾರ್ಯದರ್ಶಿಯಾಗಿ ಕ್ಷಮಾ ಪದಗ್ರಹಣ ಸ್ವೀಕರಿಸಿದರು.ರೋಟರಿ ಜಿಲ್ಲೆ 3182ರ ಜಿಲ್ಲಾ ರೋಟರ್ಯಾಕ್ಟ್ ಪ್ರತಿನಿಧಿ ಶ್ರುತಿ ಶೆಣೈ ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್‍ನ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು.ಶ್ರೇಯಾ ಸ್ವಾಗತಿಸಿದರು.ದೀಕ್ಷಾ ಪೂಜಾರಿ ಸಹಕರಿಸಿದರು.ಕ್ಷಮಾ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago