ಕುಂದಾಪುರ:ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ (ತಿಮಿಂಗಿಲದ ವಾಂತಿ) ಎಂದು ಹೇಳಿ 10.ಲಕ್ಷ.ರೂಗೆ ಸಾರ್ವಜನಿಕರಿಗೆ ಮಾರಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ನಿರಂಜನ್ ಎಸ್ (26),ಮಿಲನ್ ಮೊನಿಶ್ ಶೆಟ್ಟಿ (27) ಎನ್ನುವ ಯುವಕರಿಬ್ಬರು ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 3 ಕೆ.ಜಿ 910.ಗ್ರಾಂ ತೂಕವನ್ನು ಹೊಂದಿರುವ ಹಳದಿ ಬಣ್ಣವನ್ನು ಹೊಲುವ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ಎಂದು ಸುಳ್ಳು ಹೇಳಿ ಮಾರಲು ಯತ್ನಿಸುತ್ತಿದ್ದಾಗ ಕ್ಲಪ್ತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೈಂದೂರು ಠಾಣೆ ಪೊಲೀಸರು ವಸ್ತು ಸಹಿತ ಯುವಕರನ್ನು ಬಂಧಿಸಿದ್ದಾರೆ.ಈ ರೀತಿ ಸುಳ್ಳುಗಳನ್ನು ಹೇಳಿ ಮಾರಾಟ ಮಾಡುವ ಜಾಲವೊಂದು ಸಕ್ರೀಯವಾಗಿದ್ದು,ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿಗಳು ಲಭ್ಯವಾದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಕೋರಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…