ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ ನಂಬಿಕೆ ಇದೆ ಆಧುನಿಕ ಬದುಕಿಗೆ ಹೊಂದಿಕೊಂಡು ಅವೆಲ್ಲವೂ ಮರೆಯಾಗಿದೆ.ಆರೋಗ್ಯ ದ್ರಷ್ಟಿಯಲ್ಲಿ ಇಂಥಹ ತಿಂಡಿ ತಿನಿಸುಗಳನ್ನು ಯುವ ಪೀಳಿಗೆ ಜತೆಗೆ ಸಮುದಾಯಕ್ಕೂ ಪರಿಚಯಿಸುವ ಅಗತ್ಯವಿದೆ ಎಂದರು.ಶಾಲಾ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ,ಸಾಹಿತಿ ಮುಸ್ತಾಕ್ ಹೆನ್ನಾಬೈಲ್, ಮುಖ್ಯ ಶಿಕ್ಷಕ ಪದ್ಮನಾಭ ಶೇಟ್, ಕಾರ್ಯಕ್ರಮ ರೂವಾರಿ ರಾಜೇಂದ್ರ ಬೆಚ್ಚಳ್ಳಿ, ಅಂಗನವಾಡಿ ಶಿಕ್ಷಕಿ ದಿವ್ಯ,ಸಹ ಶಿಕ್ಷಕಿ ಅಮೃತ,ಗೌರವ ಶಿಕ್ಷಕಿ ಶ್ರುತಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…