ಪ್ರಾದೇಶಿಕ ಸುದ್ದಿ

ಮರವಂತೆ ಬೀಚ್ ನಲ್ಲಿ ನೀರಿಗೆ ಇಳಿದ ಪ್ರವಾಸಿಗ ಸಮುದ್ರ ಪಾಲು

Share

ಕುಂದಾಪುರ:ಪಡುಬಿದ್ರಿ ಯಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಹತ್ತಿಕೊಂಡು ಬಂದಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೆವಂಡಿ ನಿವಾಸಿ ಪೀರೂ ನದಾಫ್ (22) ಎನ್ನುವ ಯುವಕನೊಬ್ಬ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದ ಪರಿಣಾಮ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು ಸಮುದ್ರದಲ್ಲಿ ನಾಪತ್ತೆ ಆದ ಘಟನೆ ಮಂಗಳವಾರ ನಡೆದಿದೆ.

ಉಡುಪಿಯಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿಕೊಂಡಿರುವ ಗದಗ ಜಿಲ್ಲೆಯ ಪೀರೂ ನದಾಫ್ ಎನ್ನುವ ಯುವಕ ಊರಿಗೆ ಹೋಗುವ ಸಲುವಾಗಿ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಉಡುಪಿಯಲ್ಲಿ ಅಡ್ಡ ಗಟ್ಟಿ ಹತ್ತಿಕೊಂಡಿದ್ದಾನೆ.ಮಧ್ಯಾಹ್ನ 2.30 ರ ಸುಮಾರಿಗೆ ಊಟಕ್ಕೆಂದು ತ್ರಾಸಿ-ಮರವಂತೆ ಬೀಚ್ ಬದಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಟ್ಯಾಂಕರ್ ಚಾಲಕ ಗಾಡಿಯನ್ನು ನಿಲ್ಲಿಸಿದಾಗ,ಸಮುದ್ರಕ್ಕೆ ಕಡೆಗೆ ಸಾಗಿದ ಪೀರೂ ನದಾಫ್ ಬೀಚ್‍ಗೆ ಇಳಿದು ನೀರಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಸಮುದ್ರದಲ್ಲಿ ನಾಪತ್ತೆ ಆಗಿದ್ದಾನೆ.

.

Advertisement

Share
Team Kundapur

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago