ಕುಂದಾಪುರ:ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಲಾಡಿ, ಮೊಳಹಳ್ಳಿ,ಹಾರ್ದಳ್ಳಿ- ಮಂಡಳ್ಳಿ,ಹೊಂಬಾಡಿ-ಮಂಡಾಡಿ,ಹೆಂಗವಳ್ಳಿ ಅಮಾಸೆಬೈಲ್ ಪಂಚಾಯತ್ ಗಳಿಗೆ ಸಂಭಂದಿಸಿದಂತೆ ಕುಂದುಕೊರತೆ ಸಭೆ ಹಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.15ನೇ ಹಣಕಾಸು,ನರೇಗಾ,ಜೆಎಂಜೆ ಸೇರಿದಂತೆ ವಿವಿಧ ಇಲಾಖೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಇಲಾಖೆಯಡಿ ದೊರಕುವ ಸವಲತ್ತುಗಳ ಕುರಿತು ಮಾಹಿತಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.ಹಾಗೂ ಅಮೃತ ಗ್ರಾಮ ಅಭಿಯಾನದಡಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಉಡುಪಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ, ಜಿ.ಪಂ ಸಹಾಯಕ ನಿರ್ದೇಶಕರಾದ ಕೆ.ಜಿ ರಾಮ್ ದಾಸ್,ಎಡಿಪಿಸಿ ವಿಜಯ್ ಶ್ಯಾಮ್,ತಾ.ಪಂ ಮ್ಯಾನೇಜರ್ ರಾಮಚಂದ್ರ ಮಯ್ಯ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…