ಹಡಿಲು ಭೂಮಿಗೆ ಮರುಜೀವ,ಗದ್ದೆ ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

Share

ಕುಂದಾಪುರ:ಚಿಕ್ಕ ಹಿಡುವಳಿ,ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾದ ಕಾರಣ ಸಾವಿರಾರು ಎಕರೆ ಭತ್ತದ ಗದ್ದೆಗಳು ಹಡಿಲು ಬಿದ್ದಿವೆ,ಹಡಿಲು ಭೂಮಿಗೆ ಮರುಜೀವ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಕೃಷಿ ಇಲಾಖೆಗಳ ಮೂಲಕ ಹಡಿಲು ಭೂಮಿಯನ್ನು ಕೃಷಿ ಮಾಡುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಒತ್ತು ನೀಡಿ,ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ,ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಈಗಾಗಲೇ 1034 ಎಕ್ರೆ ಭೂಮಿಯನ್ನು ಜಿಲ್ಲೆಯಲ್ಲಿ ಗುರುತಿಸಿ ಸಂಜೀವಿನಿ ಸದಸ್ಯರು ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು.ಈ ಮೂಲಕ ಸುಸ್ಥಿರ ಅಭಿವೃದ್ಧಿಯ, ಸ್ವಾವಲಂಬನೆ ಹಾಗೂ ಪರಿಸರ ಪೂರಕವಾದ ಮಹತ್ಕಾರ್ಯದಲ್ಲಿ ಉತ್ತೇಜನ ನೀಡಲಾಗುತ್ತಿದೆ.ಹಲವಾರು ಕಡೆ ಈಗಾಗಲೇ ನೇರ ಬಿತ್ತನೆ ಮೂಲಕ ಹಾಗೂ ನಾಟಿಯ ಮೂಲಕ ಬೇಸಾಯ ಆರಂಭವಾಗಿದೆ.

ಕುಂದಾಪುರ ತಾಲೂಕಿನ ಅಂಪಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡಾಳಿಯಲ್ಲಿ 12 ಎಕರೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿಯ ನಾಟಿ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಖುದ್ದಾಗಿ ಭಾಗವಹಿಸುವ ಮೂಲಕ ಮಾದರಿ ಕೆಲಸದಲ್ಲಿ ತೊಡಗಿ ಕೊಂಡಿದ್ದಾರೆ.

ಕುಂದ ನಾಡು ರೈತ ಉತ್ಪಾದಕ ಸಂಸ್ಥೆ ಹಾಗೂ ಅಂಪಾರು ರೋಟರಿ ಕ್ಲಬ್ ರವರ ಸಹಯೋಗದಲ್ಲಿ ವನಶ್ರೀ ಸಂಜೀವಿನಿ ಒಕ್ಕೂಟದ ನೂರಾರು ಸದಸ್ಯರು ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಭತ್ತದ ನೇಜಿಯ ಕಟ್ಟನ್ನು ಬಿಚ್ಚಿ ವಿತರಿಸುವುದರ ಮೂಲಕ ಸಿಇಒ ರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸ್ಥಳೀಯ ಕೃಷಿಕರನ್ನು ಸನ್ಮಾನಿಸಲಾಯಿತು.
ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಸಂತೋಷ್ ಬಲ್ಲಾಡಿ ಅವರು ರೈತ ಉತ್ಪಾದಕ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಹಡಿಲು ಭೂಮಿ ಕೃಷಿಯ ಕಾರ್ಯದ ಬಗ್ಗೆ ತಿಳಿಸಿದರು.ಸಾಂಪ್ರದಾಯಿಕ ಪದ್ಧತಿಗಳ ಅನಾವರಣ ಮಾಡಲಾಯಿತು.ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರಸನ್ನ ಅವರು ಭಾರಿ ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ
ಕೋಣಗಳ ಮೂಲಕ ಉಳುಮೆ ಮಾಡಿ,ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭಾರತಿ,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೂಪ, ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಕಾರ್ಯದರ್ಶಿ ಉಮೇಶ್ ಶಾನ್ಕಟ್,ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಕುಮಾರ್ ಶೆಟ್ಟಿ ,ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ ,ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೋಷನಿ ಶೆಟ್ಟಿ,ವಿವಿಧ ಇಲಾಖೆಗಳ ಅಧಿಕಾರಿಗಳು,ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಸದಸ್ಯರು,ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಬೈಂದೂರು – 70.5 ಎಕರೆ
ಕುಂದಾಪುರ – 186.23 ಎಕ್ರೆ
ಬ್ರಹ್ಮಾವರ – 202.9 ಎಕ್ರೆ
ಉಡುಪಿ – 125 ಎಕ್ರೆ
ಕಾಪು – 139.34 ಎಕ್ರೆ
ಕಾರ್ಕಳ – 225.67 ಎಕ್ರೆ
ಹೆಬ್ರಿ – 84.53 ಎಕ್ರೆ ಸೇರಿ
ಉಡುಪಿ ಜಿಲ್ಲೆಯಲ್ಲಿ ಒಟ್ಟು -‌1034 ಎಕ್ರೆ ಪ್ರದೇಶದಲ್ಲಿ ಹಡಿಲು ಭೂಮಿಗೆ ಮರುಜೀವ ನೀಡಲಾಗಿದೆ.

(ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರಸನ್ನ ಅವರು ಭಾರಿ ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ
ಕೋಣಗಳ ಮೂಲಕ ಉಳುಮೆ ಮಾಡಿ,ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು)

Advertisement

Share

Leave a comment

Your email address will not be published. Required fields are marked *

You cannot copy content of this page