ಕುಂದಾಪುರ:ಬೈಂದೂರು ತಾಲೂಕಿನ ನೆರೆ ಪೀಡಿತ ಪ್ರದೇಶವಾದ ನಾವುಂದ ಸಾಲ್ಬುಡಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ.ಕೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನೆರೆ ಬಾಧಿತ ಪ್ರದೇಶಗಳಲ್ಲಿ ಮುನನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ,ಆರ್.ಐ ಮಂಜು,ವಿ.ಎ ಸಂದೀಪ್ ಉಪಸ್ಥಿತರಿದ್ದರು.
ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲ್ಬುಡ,ನಾವುಂದ ಹಾಗೂ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುದ್ವೀಪ,ಹಡವು,ಪಡುಕೋಣೆ,ಚಿಕ್ಕಳ್ಳಿ,ಬಡಾಕೆರೆ ಮತ್ತು ಹೊಸಾಡು,ಸೇನಾಪುರ ಭಾಗದ ನದಿ ತೀರ ಪ್ರದೇಶಗಳಲ್ಲಿ ಸತತ ಮೂರು ದಿನಗಳಿಂದ ನೆರೆ ನೀರು ಆವರಿಸಿಕೊಂಡಿದ್ದರ ಪರಿಣಾಮ ಅಪಾರ ಪ್ರಮಾಣದಲ್ಲಿ ಕೃಷಿ ನಷ್ಟ ಉಂಟಾಗಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…