ಉಡುಪಿ:ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ,ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ.ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು,ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಎಂದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…