ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಹೋಟೆಲ್ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ನಡೆಯಿತು.
ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ನಿರ್ಗಮಿತ ಅಧ್ಯಕ್ಷ ನಾಗೇಶ್ ಪೂಜಾರಿ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಲಯನ್ ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ಕಾರ್ಯದರ್ಶಿ ಬೋಜರಾಜ್ ಶೆಟ್ಟಿ,ವಲಯಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರಕೋಡು,ಪದಗ್ರಹಣ ಅಧಿಕಾರಿ ಮಾಜಿ ಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ಪಿಎಂಜೆಎಫ್,ನಿಕಟಪೂರ್ವ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಮತ್ತು ಕೋಶಾಧಿಕಾರಿ ಸುರೇಶ್ ಹಕ್ಲಾಡಿ ಉಪಸ್ಥಿತರಿದ್ದರು.ಲಯನ್ಸ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಗಣಪ್ಪಯ್ಯ ಶೆಟ್ಟಿ ಬಾಳೆಮನೆ,ಕಾರ್ಯದರ್ಶಿಯಾಗಿ ಸಂಜೀವ ಬಿಲ್ಲವ ಹಾಗೂ ಕೋಶಾಧಿಕಾರಿಯಾಗಿ ಶೇಖರ್ ಬಳೆಗಾರ ಅಧಿಕಾರ ಸ್ವೀಕರಿಸಿದರು.ಶಶಿಧರ್ ಶೆಟ್ಟಿ,ಭಾರತಿ ಕೆ ಶೆಟ್ಟಿ,ಪೂರ್ಣಿಮಾ ಎಸ್ ಬಿಲ್ಲವ ನೂತನ ಸದಸ್ಯರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.ಸಮಾಜದ ಅಶಕ್ತ ಬಡ ಜನರಿಗೆ ಹಾಗೂ ಅನಾರೋಗ್ಯ ಪೀಡಿತರಾಗಿ 50,000.ರೂ ಧನ ಸಾಹಯ ನೀಡಲಾಯಿತು.2022-23ನೇ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.ನಾಗೇಶ್ ಪೂಜಾರಿ ಸ್ವಾಗತಿಸಿದರು.ಸತೀಶ್ ಶೆಟ್ಟಿ ಪರಿಚಯಿಸಿದರು.ಡಾ.ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು.ಸಂಜೀವ ಬಿಲ್ಲವ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…