ಉಡುಪಿ:ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದ್ದರಿಂದ ಆಪತ್ಭಾಂದವ ಈಶ್ವರ್ ಮಲ್ಪೆ ಅವರು ತಮ್ಮ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಸಮಯಕ್ಕೆ ಸರಿಯಾಗಿ ತಲುಪಿಸುವುದರ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ತೀವ್ರ ಸ್ವರೂಪದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಬೇಕಾಗಿತ್ತು.ಖಾಸಗಿ ಆಂಬ್ಯುಲೆನ್ಸ್ ಅವರ ಬಳಿ ಕೇಳಿಕೊಂಡಾಗ ಪ್ರಯಾಣ ವೆಚ್ಚ 28,000.ರೂ ತಗಲುದೆಂದು ಸೂಚಿಸಿದರು.ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬ ಅಷ್ಟೊಂದು ಹಣವನ್ನು ಹೊಂದಿಸಲು ಸಾಧ್ಯವಾಗದೆ ಈಶ್ವರ ಮಲ್ಪೆ ಅವರ ಬಳಿ ಕೇಳಿಕೊಂಡಿದ್ದಾರೆ.ಮಗುವಿನ ಜೀವಕ್ಕೆ ಬೆಲೆ ಕಟ್ಟದ ಸಮಾಜ ಸೇವಕ ಆಪತ್ಭಾಂದವ ಈಶ್ವರ್ ಮಲ್ಪೆ ಅವರು ಒಂದು ರೂಪಾಯಿಯನ್ನು ಪಡೆದುಕೊಳ್ಳದೆ ತಮ್ಮ ಆಂಬ್ಯುಲೆನ್ಸ್ ನಲ್ಲಿ ಉಚಿತವಾಗಿ ಸಮಯಕ್ಕೆ ಸರಿಯಾಗಿ ಮಗುವನ್ನು ಮಣಿಪಾಲ ಆಸ್ಪತ್ರೆಯಿಂದ ಬೆಂಗಳೂರು ಜಯದೇವ ಆಸ್ಪತ್ರೆಗೆ ರವಾನಿಸುವುದರ ಮೂಲಕ ಸಾಮಾಜಿಕ ಕಾಳಜಿ ಮೆರೆದಿದ್ದಾರೆ ಅವರ ಮಾನವೀಯ ಕಾರ್ಯ ಭಾರಿ ಪ್ರಶಂಸನೆಗೆ ಪಾತ್ರವಾಗಿದೆ.ಈಶ್ವರ ಮಲ್ಪೆ ಅವರ ಜತೆಗೆ ಶಬ್ಬೀರ್ ಮಲ್ಪೆ, ಬಿಲಾಲ್ ಮಲ್ಪೆ ಹಾಗೂ ಎಸ್ಕಾರ್ಟ್ಸ್ ವಾಹನದಲ್ಲಿ ಬುಹ್ರಾನ್ ಮಲ್ಪೆ,ದೀಪು ಮಲ್ಪೆ, ರಕ್ಷಿತ್ ಕಾಪು ಕೈ ಜೋಡಿಸಿದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…