ಕುಂದಾಪುರ

ಶಿಕ್ಷಕಿ ಅನ್ನೇಗೆ ಭಾರತೀಯ ಶೈಲಿಯಲ್ಲಿ ಬೀಳ್ಕೊಡುಗೆ

Share

ಕುಂದಾಪುರ:ಎಫ್‍ಎಸ್‍ಎಲ್ ಸಂಸ್ಥೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮಾತೃ ದೇಶಕ್ಕೆ ತೆರಳುತ್ತಿರುವ ಜರ್ಮನಿ ಮೂಲದ ನಿವಾಸಿ ಶಿಕ್ಷಕಿ ಅನ್ನೇ ಅವರನ್ನು ಶಾಲೆಯ ಎಸ್‍ಡಿಎಂಸಿ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತೀಯ ಶೈಲಿಯಲ್ಲಿ ಮುಡಿ ತುಂಬಿ ವಿಶೇಷವಾದ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ ಮತ್ತು ಸದಸ್ಯರು,ಎಫ್‍ಎಸ್‍ಎಲ್ ಸಂಸ್ಥೆ ಮಾರ್ಗದರ್ಶಕ ದಿನೇಶ,ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್,ಅಂಗನವಾಡಿ ಶಿಕ್ಷಕಿ ಮುತ್ತು,ಮಕ್ಕಳ ಪೆÇೀಷಕರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ ಸ್ವಾಗತಿಸಿ,ವಂದಿಸಿದರು.ಶಿಕ್ಷಕಿ ಅನ್ನೇ ಅವರು 30,000.ರೂ ಮೌಲ್ಯದ ಸಮವಸ್ತ್ರ,ಕ್ರೀಡಾ ಸಾಮಾಗ್ರಿ ಮತ್ತು ಐಡಿ ಕಾರ್ಡ್‍ನ್ನು ವಿದ್ಯಾರ್ಥಿಗಳಿಗೆ ಕೊಡುಗೆ ಆಗಿ ನೀಡಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago