ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಕುಂದಾಪುರ ಮೊಗವೀರ ಭವನದಲ್ಲಿ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಆದರ್ಶ ಆಸ್ಪತ್ರೆ ಎಮ್.ಡಿ ಡಾ.ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣವಾಗಿದೆ.ವಿದ್ಯಾರ್ಥಿಗಳು ಪೂರ್ವ ತಯಾರಿಯೊಂದಿಗೆ ಪರೀಕ್ಷೆಯನ್ನು ಎದುರಿಸಬೇಕೆಂದು ಶುಭ ಹಾರೈಸಿದರು.ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮುವ ಮೂಲಕ ದೇಶದ ಅರ್ಥ ವ್ಯವಸ್ಥೆಗೆ ಕೊಡುಗೆ ನೀಡಬೇಕು ಎಂದರು.
ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್ ಅವರು ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್ ಗಳ ಕುರಿತು ಮಾಹಿತಿ ನೀಡಿ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕ ಮಂಜು ಕಾಳಾವರ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ ,ವಿದ್ಯಾರ್ಥಿ ಪೋಷಕರು,ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು.ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…