ಕುಂದಾಪುರ

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ,ಅಭಿನಂದನಾ ಕಾರ್ಯಕ್ರಮ

Share

ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಕುಂದಾಪುರ ಮೊಗವೀರ ಭವನದಲ್ಲಿ ನಡೆಯಿತು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಆದರ್ಶ ಆಸ್ಪತ್ರೆ ಎಮ್.ಡಿ ಡಾ.ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣವಾಗಿದೆ.ವಿದ್ಯಾರ್ಥಿಗಳು ಪೂರ್ವ ತಯಾರಿಯೊಂದಿಗೆ ಪರೀಕ್ಷೆಯನ್ನು ಎದುರಿಸಬೇಕೆಂದು ಶುಭ ಹಾರೈಸಿದರು.ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮುವ ಮೂಲಕ ದೇಶದ ಅರ್ಥ ವ್ಯವಸ್ಥೆಗೆ ಕೊಡುಗೆ ನೀಡಬೇಕು ಎಂದರು.

ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್ ಅವರು ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್‌ ಗಳ ಕುರಿತು ಮಾಹಿತಿ ನೀಡಿ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು‌.
ಈ ಸಂದರ್ಭದಲ್ಲಿ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕ ಮಂಜು ಕಾಳಾವರ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ ,ವಿದ್ಯಾರ್ಥಿ ಪೋಷಕರು,ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು.ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago