ಕುಂದಾಪುರ

ಉಪ್ಪುಂದ ದೋಣಿ ದುರಂತ:ಶಾಸಕ ಗಂಟಿಹೊಳೆ ಭೇಟಿ

Share

ಬೈಂದೂರು:ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಭವಿಸಿದ ದೋಣಿ ದುರಂತ ಘಟನಾ ಸ್ಥಳಕ್ಕೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಭೇಟಿ ನೀಡಿ,ಮೀನುಗಾರರ ಜತೆ ಮಾತುಕತೆ ನಡೆಸಿದರು.
ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.ನಾಪತ್ತೆಯಾಗಿದ್ದ ಮೀನುಗಾರನಿಗಾಗಿ ಹುಡುಕಾಟ ಮುಂದುವರೆದಿದೆ.ಸಚಿನ್ ಎನ್ನುವವರ ಮಾಲೀಕತ್ವದ ಮರ್ಲುಚಿಕ್ಕು ಎನ್ನುವ ಹೆಸರಿನ ದೋಣಿ ಮುಳುಗಿದ್ದು ಸಂಪೂರ್ಣ ಹಾನಿ ಆಗಿದೆ.ಉಪ್ಪುಂದ,ಅಳ್ವೆಕೋಡಿ,ಕೋಡೇರಿ ಭಾಗದಲ್ಲಿ ಇಂತಹ ಘಟನೆಗಳು ಪದೆ ಪದೆ ಮರುಕಳಿಸುತ್ತಾ ಇದ್ದರೂ ಬ್ರೇಕ್ ವಾಟರ್,ಬಂದರು ಅಭಿವೃದ್ಧಿ ಪಡಿಸುವಲ್ಲಿ ಸರಕಾರಗಳು ಆಸಕ್ತಿ ತೋರಿಸುತ್ತಿಲ್ಲ ಎಂದು ಮೀನುಗಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಜುಲೈ ತಿಂಗಳಿನಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳಲ್ಲಿ ಸಂಭವಿಸಿದ ಜಲ ದುರಂತದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.

(ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ)

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago