ಜನ ಸೇವೆ ಮಾಡಲು ಸಿದ್ದರಿಲ್ಲದಿದ್ದವರು ಸ್ಥಾನ ತ್ಯಾಗ ಮಾಡಿ-ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

Share

Advertisement
Advertisement

ಉಡುಪಿ:ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ.ಅಧಿಕಾರಿಗಳು ನಿರ್ಲಕ್ಷ್ಯ,ಉದಾಶೀನ ತೋರಿಸಿದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ,ಜನ ಸೇವೆ ಮಾಡಲು ಸಿದ್ದರಿಲ್ಲದಿದ್ದವರು ಸ್ಥಾನ ತ್ಯಾಗ ಮಾಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದರು.
ಉಡುಪಿ ಜಿಲ್ಲಾ ಪಂಚಾಯತ್‍ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿದ ಸಿಎಂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.
ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಇಲ್ಲವೋ,ಹಕ್ಕು ಪತ್ರ ಉಂಟೋ ಇಲ್ಲವೋ ಎಂದು ಪರಿಗಣನೆ ಮಾಡದೆ ವಾಸಸ್ಥಳದಲ್ಲಿ ಕಟ್ಟಿಕೊಂಡಿದ್ದ ಮನೆಗಳು ಪ್ರಕೃತಿ ವಿಕೋಪದಿಂದ ಸಂಪೂರ್ಣವಾಗಿ ಹಾನಿಯಾಗಿದ್ದರೆ 5.ಲಕ್ಷ.ರೂ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು.ಸಂತೃಸ್ಥರಿಗೆ ಮನೆ ಮೊದಲು ಆಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆ ನಡೆಸಿ,ಮಳೆ ಕಾರಣದಿಂದ ಬೆಳೆ ಹಾನಿ ಉಂಟಾದ ರೈತರಿಗೆ ಪರಿಹಾರ ಸಿಗುವಂತೆ ಆಗಬೇಕು.ಪರ್ಯಾಯ ಬೆಳೆ ಬೆಳೆಯಲು ಅಗತ್ಯ ಬೀಜ,ಗೊಬ್ಬರ ಒದಗಿಸಬೇಕೆಂದರು.ಗ್ರಾಮೀಣ ಪ್ರದೇಶಗಳಲ್ಲಿ ಎರಡು ವರ್ಷಗಳ ಒಳಗೆ ಕಾಲು ಸಂಕಗಳು,ಸೇತುಗಳು ಪೂರ್ಣ ಹಂತದಲ್ಲಿ ನಿರ್ಮಾಣವಾಗುವಂತೆ ಕ್ರಮ ಜರುಗಿಸಬೇಕೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆರೋಗ್ಯ ಮತ್ತು ಶಿಕ್ಷಣ ಸೂಚ್ಯಂಕದಲ್ಲಿ ಕುಸಿತಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ರಸ್ತೆ ಅಪಘಾತದಲ್ಲಿ ಸಾವು-ನೋವು,ಸೈಬರ್ ಕ್ರೈಂ ಹೆಚ್ಚಳಕ್ಕೆ ಸಿಡಿಮಿಡಿಗೊಂಡ ಮುಖ್ಯಂತ್ರಿಗಳು ಅಧಿಕಾರಿಗಳನ್ನು ಪ್ರಶ್ನಿಸಿ ಕ್ರಮ ಏನೇನು ಕೈಗೊಂಡಿದ್ದಿರಿ ಎಂದು ಪ್ರಶ್ನಿಸಿದರು.ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,ಕೋಟ ಶ್ರೀನಿವಾಸ ಪೂಜಾರಿ,ಜಿಲ್ಲೆಯ ಶಾಸಕರುಗಳು,ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page