ಉಡುಪಿ:ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ.ಅಧಿಕಾರಿಗಳು ನಿರ್ಲಕ್ಷ್ಯ,ಉದಾಶೀನ ತೋರಿಸಿದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ,ಜನ ಸೇವೆ ಮಾಡಲು ಸಿದ್ದರಿಲ್ಲದಿದ್ದವರು ಸ್ಥಾನ ತ್ಯಾಗ ಮಾಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದರು.
ಉಡುಪಿ ಜಿಲ್ಲಾ ಪಂಚಾಯತ್‍ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿದ ಸಿಎಂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.
ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಇಲ್ಲವೋ,ಹಕ್ಕು ಪತ್ರ ಉಂಟೋ ಇಲ್ಲವೋ ಎಂದು ಪರಿಗಣನೆ ಮಾಡದೆ ವಾಸಸ್ಥಳದಲ್ಲಿ ಕಟ್ಟಿಕೊಂಡಿದ್ದ ಮನೆಗಳು ಪ್ರಕೃತಿ ವಿಕೋಪದಿಂದ ಸಂಪೂರ್ಣವಾಗಿ ಹಾನಿಯಾಗಿದ್ದರೆ 5.ಲಕ್ಷ.ರೂ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು.ಸಂತೃಸ್ಥರಿಗೆ ಮನೆ ಮೊದಲು ಆಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆ ನಡೆಸಿ,ಮಳೆ ಕಾರಣದಿಂದ ಬೆಳೆ ಹಾನಿ ಉಂಟಾದ ರೈತರಿಗೆ ಪರಿಹಾರ ಸಿಗುವಂತೆ ಆಗಬೇಕು.ಪರ್ಯಾಯ ಬೆಳೆ ಬೆಳೆಯಲು ಅಗತ್ಯ ಬೀಜ,ಗೊಬ್ಬರ ಒದಗಿಸಬೇಕೆಂದರು.ಗ್ರಾಮೀಣ ಪ್ರದೇಶಗಳಲ್ಲಿ ಎರಡು ವರ್ಷಗಳ ಒಳಗೆ ಕಾಲು ಸಂಕಗಳು,ಸೇತುಗಳು ಪೂರ್ಣ ಹಂತದಲ್ಲಿ ನಿರ್ಮಾಣವಾಗುವಂತೆ ಕ್ರಮ ಜರುಗಿಸಬೇಕೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆರೋಗ್ಯ ಮತ್ತು ಶಿಕ್ಷಣ ಸೂಚ್ಯಂಕದಲ್ಲಿ ಕುಸಿತಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ರಸ್ತೆ ಅಪಘಾತದಲ್ಲಿ ಸಾವು-ನೋವು,ಸೈಬರ್ ಕ್ರೈಂ ಹೆಚ್ಚಳಕ್ಕೆ ಸಿಡಿಮಿಡಿಗೊಂಡ ಮುಖ್ಯಂತ್ರಿಗಳು ಅಧಿಕಾರಿಗಳನ್ನು ಪ್ರಶ್ನಿಸಿ ಕ್ರಮ ಏನೇನು ಕೈಗೊಂಡಿದ್ದಿರಿ ಎಂದು ಪ್ರಶ್ನಿಸಿದರು.ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,ಕೋಟ ಶ್ರೀನಿವಾಸ ಪೂಜಾರಿ,ಜಿಲ್ಲೆಯ ಶಾಸಕರುಗಳು,ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…