ಕುಂದಾಪುರ:ಸರಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗದೆ ಇರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು.
ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಬುಧವಾರ ನಡೆದ ಬಿಜೆಪಿ ಪಕ್ಷದ ಬೈಂದೂರು ಮಂಡಲ ಅದರ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಮುಂದಿನ ಮೂರು ತಿಂಗಳುಗಳ ಅವಧಿಯಲ್ಲಿ ಪಕ್ಷದ ಕಾರ್ಯ ಯೋಜನೆಗಳು ಮತ್ತು ಹೋರಾಟಗಳ ಬಗ್ಗೆ ಚರ್ಚಿಸಲು ಸಭೆಗಳನ್ನು ನಡೆಸಲಾಗುವುದು ಪಕ್ಷದ ಬಲರ್ವಧನೆಗೆ ಕಾರ್ಯಕರ್ತರು ಸಜ್ಜಾಗಿ ಇರಬೇಕು ಎಂದು ಹೇಳಿದರು.ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ,ಆನಂದ ಖಾರ್ವಿ,ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯಕ್,ಶಕ್ತಿ ಕೇಂದ್ರದ ಅಧ್ಯಕ್ಷ ಮಿಥುನ್ ದೇವಾಡಿಗ,ಭೂತ್ ಅಧ್ಯಕ್ಷ ರಾಘವೇಂದ್ರ ದೇವಾಡಿಗ,ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲ ಕುಂದರ್,ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು.ವಿನೋದ್ ಭಂಡಾರಿ ನಿರೂಪಿಸಿದರು.ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…