ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು.
ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ ಇನ್ನಷ್ಟು ಕಾಳಜಿ ಮೂಡುವಂತೆ ಮಾಡಿದೆ ಎಂದರು.ಹಂಗಳೂರು ಗ್ರಾಮ ಪಂಚಾಯತ್ ಅದ್ಯಕ್ಷ ಆನಂದ ಚಾಲನೆಯನ್ನು ನೀಡಿ ಶುಭಹಾರೈಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಸಿಬ್ಬಂದಿಗಳು,ಎನ್‍ಆರ್‍ಎಲ್‍ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ಕೃಷಿ ವ್ಯವಸ್ಥಾಪಕಿ ಸಂತೃಪ್ತಿ,ಸ್ಪಂದನ ಒಕ್ಕೂಟ ಅಧ್ಯಕ್ಷೆ ಜಯಂತಿ,ಕಾರ್ಯದರ್ಶಿ ಸವಿತ,ಸುಜಾಜ,ಜ್ಯೋತಿ,ಪುಷ್ಪ,ಜಯಲಕ್ಷ್ಮೀ,ಅನಿತಾ,ಸಂಜೀವಿನಿ ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.ಎಂಬಿಕೆ ಶೋಭಾ ನಿರೂಪಿಸಿ,ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…