ಸಿ.ಎಂ ಸಿದ್ದರಾಮ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ
ಬೆಂಗಳೂರು:ದೆಹಲಿ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ವಿಶೇಷ ಉಡುಗೊರೆ ನೀಡಿ ಸ್ವಾಗತಿಸಿ,ಬಳಿಕ ಮಾತುಕತೆ ನಡೆಸಿದರು.
ಪ್ರಧಾನಿಯವರ ಜತೆ ಮಾತುಕತೆ ನಡೆಸಿದ ನಂತರ ಸಿ.ಎಂ ಸಿದ್ದರಾಮಯ್ಯನವರು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿಯನ್ನು ಮಾಡಿಕೊಂಡರು.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ ಉಪಸ್ಥಿತರಿದ್ದರು.
(ದೆಹಲಿ ಪ್ರವಾಸದಲ್ಲಿರುವ ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು)




















































































































































































































































































































































































































































































































































































































































































































































































































































































































































































































































































































































































































































































































































































































































































