ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ ಮನವಿಯನ್ನು ಮಾಡಿದ್ದಾರೆ.
ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು ಕೇಂದ್ರ ಸಚಿವರ ಗಮನಕ್ಕೆ ತಂದ ಸಂಸದರು ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ಉಪ್ಪುಂದದಲ್ಲಿ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿಯನ್ನು ಸಲ್ಲಿಸಿದರು.ಬೈಂದೂರಿನಲ್ಲಿ 228.78 ಕೋಟಿ.ರೂ ವೆಚ್ಚದಲ್ಲಿ ಮಲ್ಟಿಪರ್ಪಸ್ ಹಾರ್ಬರ್ ಸ್ಥಾಪನೆಗೆ ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿದ್ದು,ಯಾವುದೇ ಕಂಪನಿಗಳು ಸದರಿ ಟೆಂಡರ್ ಪ್ರಕ್ರಿಯೆಲ್ಲಿ ಭಾಗವಹಿಸಿರಲಿಲ್ಲ.ಯೋಜನೆಗಳಿಗೆ ಬ್ರೇಕ್‍ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯಸಾಧ್ಯವಾವುದಿಲ್ಲ ಎಂದು ಕೇಂದ್ರ ಸಚಿವರಿಗೆ ವಿವರಣೆ ನೀಡಿದ ಸಂದರು ಸದರಿ ಯೋಜನೆಗಳಿಗೆ 228.78 ಕೋಟಿ ಅವಶ್ಯಕತೆ ಇದ್ದು ಸರಕಾರ ಖುದ್ದಾಗಿ ಕಾಮಗಾರಿ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ವಿನಂಸಿದರು.ಈ ಬಗ್ಗೆ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…