ಬೈಂದೂರು:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಬಂದರಿನ ಸುಮಾರು ಐದು ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ನಾಡದೋಣಿಯೊಂದು ಸಮುದ್ರ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು,ದೋಣಿಯಲ್ಲಿದ್ದ 9 ಜನ ಮೀನುಗಾರರು ಪಾರಾಗಿದ್ದಾರೆ.ಬಲೆ,ದೋಣಿಯಲ್ಲಿನ ಇಂಜಿನ್‍ಗೆ ಹಾನಿಯಾಗಿದೆ.ಅಂದಾಜು 2.ಲಕ್ಷ.ರೂ ನಷ್ಟ ಉಂಟಾಗಿದ್ದ ಘಟನೆ ಶುಕ್ರವಾರ ನಡೆದಿದೆ.
ಉಪ್ಪುಂದ ಗ್ರಾಮದ ಪಾಳ್ಯದರ ತೋಪ್ಲು ಪುರ್ಶುಯ್ಯನ ಪುಂಡಲೀಕ ಎನ್ನುವವರ ಮಾಲಿಕತ್ವದ ಶ್ರೀದುರ್ಗಾಪರಮೇಶ್ವರಿ ಎನ್ನುವ ದೋಣಿಯಲ್ಲಿ ಶುಕ್ರವಾರ 9 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಅಲೆಯ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿ ಹೊಡೆದು ಮುಳುಗಿದೆ.ತಕ್ಷಣದಲ್ಲಿ ಮಾಹಿತಿ ಸಿಕ್ಕಿದ್ದರಿಂದ ಘಟನೆ ಸ್ಥಳಕ್ಕೆ ದೋಣಿಗಳ ಮೂಲಕ ದೌಡಾಯಿಸಿದ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.ಕೂದಲೆಳೆ ಅಂತರದಲ್ಲಿ ಬಾರಿ ದೊಡ್ಡ ಅನಾಹುತವೊಂದು ತಪ್ಪಿದ್ದು ಮೀನುಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಮೀನುಗಾರಿಕೆ ತೆರಳುವ ಸಂದರ್ಭದಲ್ಲಿ ಲೈಫ್ ಜಾಕೇಟ್ ಬಳಕೆ ಮಾಡುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮನವಿಯನ್ನು ಮಾಡಿಕೊಂಡಿದ್ದಾರೆ.ಒಂದು ವಾರದೊಳಗೆ ಸಂಭವಿಸಿದ ಇದು ಎರಡನೆ ದೋಣಿ ದುರಂತವಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…