ಉಡುಪಿ

ಹೆದ್ದಾರಿಗೆ ಬಂದ ನಾಗರ ಹಾವು,ಟಿಪ್ಪರ್‌ನೊಳಗೆ ನುಗ್ಗಿಆವಾಂತರ

Share

ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದು ಪಾರ್ಕ್ ಮಾಡಿದ್ದ ಟಿಪ್ಪನೊಳಗೆ ಹೊಕ್ಕಿ ಆವಾಂತರ ಸೃಷ್ಟಿಸಿದ ಘಟನೆ ನಡೆದಿದೆ.
ರಸ್ತೆಯನ್ನು ದಾಟುತ್ತಿದ್ದ ನಾಗರ ಹಾವು ವಾಹನಗಳ ಚಕ್ರದಡಿಗೆ ಸಿಲುಕದಂತೆ ರಕ್ಷಿಸುವ ನಿಟ್ಟಿನಲ್ಲಿ ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಡುತ್ತಿದ್ದ ಸಂದರ್ಭ ಅದೇ ಮಾರ್ಗದಲ್ಲಿ ಬರುತ್ತಿದ್ದ ಟಿಪ್ಪರ್ ಚಾಲಕನೋರ್ವ,ಹಾವನ್ನು ರಕ್ಷಣೆ ಮಾಡುತ್ತಿರುವುದನ್ನು ವೀಕ್ಷಿಸಲು ತನ್ನ
ಟಿಪ್ಪರನ್ನು ರಸ್ತೆ ಬದಿ ಪಾರ್ಕ್ ಮಾಡಿ ಬಂದಿದ್ದ.
ಅಷ್ಟರಲ್ಲಿ ರಸ್ತೆ ದಾಟುತ್ತಿದ್ದ ಹಾವು ನೇರವಾಗಿ ಟಿಪ್ಪರ್ ಅಡಿಯಿಂದ ಮೇಲೇರಿ ಟಿಪ್ಪರ್ ಒಳಗೆ ಸೇರಿ ಕುಳಿತಿತ್ತು. ಸ್ಥಳದಲ್ಲಿದ್ದವರು ಎಷ್ಟು ಪ್ರಯತ್ನಿಸಿದರೂ ಜಪ್ಪೆನ್ನದಾಗ
ಉರಗ ತಜ್ಞ ಗೋವರ್ಧನ್ ಭಟ್ ಅವರು ಸ್ಥಳಕ್ಕೆ ಧಾವಿಸಿ ಟಿಪ್ಪರ್‌ನೊಳಗೆ ಅವಿತು ಕುಳಿತಿದ್ದ ನಾಗರ ಹಾವನ್ನು ಹೊರಗೆ ತೆಗೆದು,ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಬಿಟ್ಟಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago