ಕುಂದಾಪುರ:ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರು-ಶಿಕ್ಷಕರ ಸಭೆ ನಡೆಯಿತು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಮಾತನಾಡಿ,ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಬದಲಾದ ಪರೀಕ್ಷಾ ಪದ್ದತಿ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಡುಪಿ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ,ಸ್ಪರ್ಧಾತ್ಮಕ ಯುಗದಲ್ಲಿ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳು ಬಹಳಷ್ಟು ಪ್ರಯೋಜನಕಾರಿ ಆಗಿವೆ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜತೆ ಜೊತೆಗೆ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎಂದು ಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ,ಬೋಧಕೇತರ ವೃಂದವರು,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ನಿರೂಪಿಸಿದರು.ಉಪನ್ಯಾಸಕ ಅಭಿಜಿತ್ ವಂದಿಸಿದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ,ಕಲಿಕಾ ಪ್ರಗತಿ ಕುರಿತು ಚರ್ಚಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…