ಕುಂದಾಪುರ

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Share

ಕುಂದಾಪುರ:ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರು-ಶಿಕ್ಷಕರ ಸಭೆ ನಡೆಯಿತು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಮಾತನಾಡಿ,ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಬದಲಾದ ಪರೀಕ್ಷಾ ಪದ್ದತಿ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಡುಪಿ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ,ಸ್ಪರ್ಧಾತ್ಮಕ ಯುಗದಲ್ಲಿ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳು ಬಹಳಷ್ಟು ಪ್ರಯೋಜನಕಾರಿ ಆಗಿವೆ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜತೆ ಜೊತೆಗೆ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎಂದು ಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ,ಬೋಧಕೇತರ ವೃಂದವರು,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ನಿರೂಪಿಸಿದರು.ಉಪನ್ಯಾಸಕ ಅಭಿಜಿತ್ ವಂದಿಸಿದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ,ಕಲಿಕಾ ಪ್ರಗತಿ ಕುರಿತು ಚರ್ಚಿಸಲಾಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago