ಉಡುಪಿ:ಸಾಮಾಜಿಕ ನ್ಯಾಯದ ಅಡಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಉತ್ಸುಕನಾಗಿದ್ದೇನೆ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಬ್ರಹ್ಮವಾರ ತಾಲೂಕಿನ ಅಮ್ಮುಂಜೆಯ ತಮ್ಮ ನಿವಾಸದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೆಶೀಸಿ ಮಾತನಾಡಿದ ಅವರು ಪಕ್ಷವೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶವನ್ನು ನೀಡಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಕಣ್ಣನ್ನು ಇಟ್ಟಿರುವ ಅವರು, ಪಕ್ಷದ ವತಿಯಿಂದ ಟಿಕೆಟ್ ನೀಡಿದ್ದಲ್ಲಿ ಎಲ್ಲರ ಆರ್ಶೀವಾದ ಪಡೆದು ಮತದಾರರ ಸಹಕಾರದಿಂದ ಎಲೆಕ್ಷನ್ ಎದುರಿಸಲು ಸಿದ್ದನಿದ್ದೇನೆ ಎಂದು ಹೇಳಿದರು.ಈ ವರೆಗೆ ಪಕ್ಷ ಯಾವುದೆ ರೀತಿ ಪ್ರಮುಖ ಜವಾಬ್ದಾರಿಯನ್ನು ನೀಡಿಲ್ಲ.ಪಕ್ಷದ ನಿರ್ದೇಶನದಂತೆ ವಿಧಾನಸಭೆ ಚುನಾವಣೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದೇನೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದೇನೆ,ಶಾಸಕನಾಗಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿದ ಅನುಭವ ಇದೆ ಎಂದು ಹೇಳಿದರು.ತಾನು ಬಿಜೆಪಿಯನ್ನು ತೊರೆಯುತ್ತೇನೆ ಎನ್ನುವುದು ಅಪಪ್ರಚಾರದ ಸುದ್ದಿ.ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ,ಕೊನೆ ತನಕ ಬಿಜೆಪಿಗಾಗಿ ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…