ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ:ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ

Share

Advertisement
Advertisement

ಕುಂದಾಪುರ:-ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆ,ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಜೂನ್- 2023ರಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ವಿಶಿಷ್ಟವಾದ ರೀತಿಯಲ್ಲಿ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಅನ್ವಿತಾ ಎ(286),ಕೃತಿಕಾ (248),ಪೌರ್ಣಮಿ ಐತಾಳ್ (243), ಪ್ರೇಕ್ಷಿತಾ (243), ದೀಕ್ಷಿತಾ ಗೋಪಾಲ್ (238), ಚಿರಾಗ್ ಮೆಂಡನ್ (232), ಶ್ರಾವ್ಯ ಪೂಜಾರಿ (227), ಸುಜನಾ(223), ಆಶಿಷ್ ಶೆಟ್ಟಿ(222), ತರುಣ್ (218), ಅಶ್ವಿತಾ (216), ಸುಜೇತಾ ಶೆಟ್ಟಿ (214), ಅಖಿಲೇಶ್ (211), ಪೂಜಾ ಶೇಟ್(210), ಸೂರಜ್ ಆಚಾರ್ (208), ನಿಶಿತಾ (207), ತೇಜಸ್ವಿ ಪೋಜಾರಿ (207), ಛಾಯ ಕಿರಣ್ (205), ಸುಶ್ಮಿತಾ (200), ಶ್ರಾವ್ಯ ಭಟ್ (200) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ನ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ.
ಸಂಸ್ಥೆಯಲ್ಲಿ ಬೋಧಕ ಸಿಬ್ಭಂದಿಗಳಾಗಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಅನುಭವಿ ಲೆಕ್ಕ ಪರಿಶೋಧಕರು, ತರಬೇತುದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತಿದ್ದು. ಬೋಧಕ ಸಿಬ್ಬಂಧಿ ವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Advertisement

(ಕುಂದಾಪುರದಲ್ಲಿ ಪ್ರೊಫೆಷನಲ್ ಕೋರ್ಸ್ ಗಳ ಮೂಲಕ ಉತ್ತಮ ಶಿಕ್ಷಣವನ್ನು ನೀಡುತ್ತಿರುವ “ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ” ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಹಳಷ್ಟು ಸಹಕಾರಿಯಾಗಿದ್ದು, ಸ್ಥಳೀಯವಾಗಿ ಪ್ರೊಫೆಷನಲ್ ಕೋರ್ಸ್ ಗಳನ್ನು ಮಾಡಬಹುದಾಗಿದೆ.ಈ ಹಿಂದೆ ವಿದ್ಯಾರ್ಥಿಗಳು ಪ್ರೊಫೆಷನಲ್ ಕೋರ್ಸ್ ಮಾಡಲು ದೂರದ ಊರುಗಳಿಗೆ ಹೋಗಬೇಕಾಗಿತ್ತು)

(ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ,ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳು)

                       
-ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿರುವುದು ನನಗೆ ತುಂಬಾ ಖುಷಿ‌ ಕೊಟ್ಟಿದೆ.ನನಗೆ ಉತ್ತಮ ತರಬೇತಿ ನೀಡಿದ ಶಿಕ್ಷ ಪ್ರಭಾ ಸಂಸ್ಥೆ ಹಾಗೂ ನನ್ನ ಪೋಷಕರ ಪ್ರೋತ್ಸಾಹ ನನಗೆ ಸಹಾಯವಾಗಿದೆ .ಇದಕ್ಕೆನಾನುಶಿಕ್ಷಕವೃಂದ ಹಾಗೂ ನನ್ನ ಪೋಷಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.-

 ಸಿಎ ಫೌಂಡೇಶನ್ಉತ್ತೀರ್ಣ ವಿದ್ಯಾರ್ಥಿನಿ
 ಅನ್ವಿತಾ ಎ.
Advertisement
Advertisement


Share

Leave a comment

Your email address will not be published. Required fields are marked *

You cannot copy content of this page