ಕುಂದಾಪುರ:ಆರ್ಥಿಕ ಸಂಕಷ್ಟದಲ್ಲಿರುವ ಕರಾವಳಿ ಭಾಗದ ಗೋಡಂಬಿ ಸಂಸ್ಕರಣಾ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದರು.
ಗೋಡಂಬಿ ಸಂಸ್ಕರಣಾ ಉದ್ಯಮ ಎದುರಿಸುತ್ತಿರುವ ಎರಡೆರಡು ಇಎಂಐ ಪಾವತಿಯ ಭಾರದ ಬಗ್ಗೆ ವಿತ್ತ ಸಚಿವರ ಗಮನ ಸೆಳೆದ ಸಂಸದರು.ಈ ಸಂಬಂಧ ಮಧ್ಯ ಪ್ರವೇಶಿಸಿ ಇಎಂಐ ಭಾರ ಕಡಿಮೆ ಮಾಡಲು ವಿನಂತಿಸಿದರು.ಕರಾವಳಿ ಕರ್ನಾಟಕ ಭಾಗ ಗೋಡಂಬಿ ಸಂಸ್ಕರಣಾ ಉದ್ಯಮಗಳ ಕೇಂದ್ರವಾಗಿದ್ದು, ರಾಜ್ಯದ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಜೀವನೋಪಾಯ ಒದಗಿಸಿದೆ. ಗೋಡಂಬಿ ಸಂಸ್ಕರಣೆಯು ಕರಾವಳಿ ಕರ್ನಾಟಕದ ಗ್ರಾಮೀಣ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ, 1.50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಈ ಉದ್ಯಮದ ಭಾಗವಾಗಿದ್ದು ಆ ಮೂಲಕ, ಗೋಡಂಬಿ ಉದ್ಯಮ ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ.ಪ್ರಸ್ತುತ, ಗೋಡಂಬಿ ಸಂಸ್ಕರಣಾ ಘಟಕಗಳು ಕೋವಿಡ್ ಮತ್ತು ಕೋವಿಡ್ ನಂತರದ ಅವಧಿಯ ವಿವಿಧ ರೀತಿಯ
ಸಾಲಗಳನ್ನು ಮರುಪಾವತಿಸಲು ನಾನಾ ರೀತಿಯಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿವೆ. ವಿಯೆಟ್ನಾಂನಿಂದ ಕಡಿಮೆ ಗುಣಮಟ್ಟದ ಕಚ್ಚಾ ಗೋಡಂಬಿ ಆಮದು ಉದ್ಯಮ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ.ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘವು ಇತ್ತೀಚೆಗೆ ಜುಲೈನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನೀಡಿದ ಮನವಿಯ ಬಗ್ಗೆಗೂ ಸಂಸದರು ಸಚಿವರ ಗಮನವನ್ನು ಸೆಳೆದಿದ್ದಾರೆ.
ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಲೋನ್ (ಡಬ್ಲ್ಯೂಟಿಎಲ್ ) ಸಾಲದ ಮರುಪಾವತಿಯನ್ನು ಕನಿಷ್ಠ 18 ತಿಂಗಳುಗಳ ಕಾಲ ಅಮಾನತು (ಮೊರಟೋರಿಯಂ ) ಗೊಳಿಸಿ ಮತ್ತು ಅದಕ್ಕೆ ಅನುಗುಣವಾಗಿ ಮರುಪಾವತಿಯ ಅವಧಿಯನ್ನು ವಿಸ್ತರಿಸುವುದು,
ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) 1.0 ರ ಇಎಂಐ ಪಾವತಿ ಮುಕ್ತಾಯ ಹಂತದವರೆಗೆ, ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) ವಿಸ್ತರಣೆ ಸಾಲದ (ಕೋವಿಡ್ ಸಾಲ 2.0) ದ ಇ ಇಎಂಐ ಅಮಾನತುಗೊಳಿಸುವುದು, ಹಾಗು ಅದರ ಮರು ಪಾವತಿ ಅವಧಿಯನ್ನು ವಿಸ್ತರಿಸುವುದು, ನಿಧಿಯ ಬಡ್ಡಿ ಅವಧಿಯ ಸಾಲ (ಎಫ್ ಐ ಟಿ ಎಲ್ ) ವನ್ನು ಒದಗಿಸುವಂತೆ ಅವರು ಕೋರಿದ್ದಾರೆ.ಅದೇ ರೀತಿ ಈಗಾಗಲೇ ಆರ್ಥಿಕ ದುಸ್ಥಿತಿಯಲ್ಲಿರುವುದರಿಂದ, ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಸಾಲ ಹಾಗು ಕೋವಿಡ್ ಸಾಲದ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲು ವಿತ್ತ ಸಚಿವರನ್ನು ಅವರು ಒತ್ತಾಯಿಸಿದ್ದಾರೆ.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…