ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪು ಕಲ್ಲು ಸಹಿತ,ಲಾರಿ ವಶಕ್ಕೆ

ಕುಂದಪುರ:ಯಾವುದೇ ರೀತಿಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಿಸುತ್ತಿದ್ದ ಲಾರಿಯನ್ನು ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ಗಂಗೊಳ್ಳಿ ಪೆÇಲೀಸ್ ಠಾಣೆಯ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಸಂದರ್ಭ ಕೆಂಪು ಕಲ್ಲನ್ನು ತುಂಬಿಕೊಂಡು ಮುಳ್ಳಿಕಟ್ಟೆ ಕಡೆಗೆ ಸಾಗಿ ಬರುತ್ತಿದ್ದ ಕಲ್ಲಿನ ಲಾರಿಯನ್ನು ತಪಾಸಣೆ ನಡೆಸಿ ಪರಿಶೀಲಿಸಿದಾಗ,ಯಾವುದೇ ರೀತಿ ಪರಾವಾನಿಗೆ ಇಲ್ಲದೆ ಕೆಂಪು ಕಲ್ಲನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.