ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ
ಮಂಗಳೂರು:ಮನೆಯಲ್ಲಿ ಯಾರು ಇಲ್ಲದ ವೇಳೆ ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ.
ಫೆಲಿಕ್ಸ್ ಎನ್ನುವವರ ಒಡೆತನದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ನುಗ್ಗಿದ ಕಳ್ಳರು,15 ಪವನ್ ಚಿನ್ನ ಹಾಗೂ 20,000.ರೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಫೇಲಿಕ್ಸ್ ಅವರ ಮಗಳು ಕಾಲೇಜು ಮುಗಿಸಿ ಮಧ್ಯಾಹ್ನ ವೇಳೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಮನೆ ಮಾಲೀಕ ಫೇಲಿಕ್ಸ್ ಎನ್ನುವವರು ಕೆಲಸಕ್ಕೆ ತೆರಳಿದ್ದರು,ಪತ್ನಿ ಗ್ರೇಟಾ ಸ್ಥಳೀಯ ಶಾಲೆಯಲ್ಲಿ ಕೆಲಸಕ್ಕೆ ಹೋಗಿದ್ದರು.ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತ ಪಡಿಸಿಕೊಂಡಿದ್ದ ಕಳ್ಳರು
ಮನೆ ಹಿಂಬಾಗಿಲ ಮೂಲಕ ಒಳಗೆ ನುಗ್ಗಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ,ಸಬ್ ಇನ್ಸ್ಪೆಕ್ಟರ್ ಧನ್ ರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.





















































































































































































































































































































































































































































































































































































































































































































































































































































































































































































































































































































































































































































































































































































































































































