ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ
ಕುಂದಾಪುರ:ಬೈಂದೂರುನಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಳ ಸರಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಸ್ಟೆಲ್‍ನಲ್ಲಿ ಸ್ವಚ್ಛತೆ ಮತ್ತು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಉಪಸ್ಥಿತರಿದ್ದರು.





















































































































































































































































































































































































































































































































































































































































































































































































































































































































































































































































































































































































































































































































































































































































































