ಉಡುಪಿ

ಮಿಷನ್ ಇಂದ್ರ ಧನುಷ್ 5.0 ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

Share

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅವರು ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ನೀಡಿ,ರೋಗಗಳು ಬಾರದಂತೆ ತಡೆಯಲಿವೆ.ಜಿಲ್ಲೆಯಲ್ಲಿ ಯಾವುದೇ ಅರ್ಹ ಗರ್ಭಿಣಿ ಮತ್ತು ಮಕ್ಕಳು ಈ ಲಸಿಕಾ ಅಭಿಯಾನದಿದಂದ ವಂಚಿತರಾಗದಂತೆ ಎಲ್ಲರಿಗೂ ಲಸಿಕೆ ನೀಡಿ,ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಾಗರೀಕ ಸಮಾಜದಲ್ಲಿನ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ.ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು,ಇದನ್ನೂ ಇನ್ನೂ ಎತ್ತರಕ್ಕೆ ಕೊಂಡೊಯ್ಯ ಬೇಕಿದೆ.
ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು,ಆಗಸ್ಟ್ 7 ರಿಂದ 12 ಮೊದಲನೇ ಸುತ್ತು, ಸೆಪ್ಟಂಬರ್ 11 ರಿಂದ 16 ರ ವರೆಗೆ 2 ನೇ ಸುತ್ತು ಹಾಗೂ ಅಕ್ಟೋಬರ್ 9 ರಿಂದ 14 ರ ವರೆಗೆ ಒಟ್ಟು 3 ಸುತ್ತುಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಂತೆ ವಯಸ್ಸಿಗನುಗುಣವಾಗಿ ಲಸಿಕೆ ಪಡೆಯಲು ಅರ್ಹರಾದ ಮತ್ತು ಲಸಿಕೆ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕಾ ಶಿಬಿರ ಆಯೋಜಿಸಿ ಲಸಿಕೆ ನೀಡಲಾಗುವುದು.ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 708 ಗರ್ಭಿಣಿಯರು ಮತ್ತು 0-2 ವರ್ಷದೊಳಗಿನ ಲಸಿಕೆಗೆ ಅರ್ಹರಾದ 3188 ಮಕ್ಕಳಿಗೆ ಹಾಗೂ 2-5 ವರ್ಷದೊಳಗಿನ ಲಸಿಕೆ ವಂಚಿತ 16 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು,ಇದಕ್ಕಾಗಿ 294 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ‌ ಎಂದು ಹೇಳಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago