ಕುಂದಾಪುರ:ಗರ್ಭೀಣಿ ಸ್ತ್ರೀಯರನ್ನು,ಅನಾರೋಗ್ಯ ಪೀಡಿತರನ್ನು ಕ್ಲಪ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ಚಿಕಿತ್ಸೆ ಕೊಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಆಟೋ ಚಾಲಕರು ಆಪ್ತರಕ್ಷಕರಿದ್ದಂತೆ.ಸೌಲಭ್ಯಗಳು ಎಷ್ಟೆ ಮುಂದುವರೆದಿದ್ದರೂ ಜನರಿಗೆ ನೇರವಾಗಿ,ತ್ವರಿತವಾಗಿ ಮತ್ತು ರೀಯಾತಿ ದರದಲ್ಲಿ ಸಿಗುವುದು ಆಟೋ ರಿಕ್ಷಾ ಸೇವೆ ಆಗಿದೆ.ಹಗಲು ರಾತ್ರಿ ಎನ್ನದೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುವ ರಿಕ್ಷಾ ಚಾಲಕ ಮತ್ತು ಮಾಲೀಕರ ಸೇವೆ ಶ್ಲಾಘನೀಯವಾದದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ ಶಂಕರನಾಗ್ ರಿಕ್ಷಾ ನಿಲ್ದಾಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಂಕರನಾಗ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಚಂದ್ರ ಹಕ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು.ಹೊಸಾಡು ಪಂಚಾಯತ್ ಪಿಡಿಒ ಪಾರ್ವತಿ,ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್,ಶಂಕರನಾಗ್ ರಿಕ್ಷಾ ಚಾಲಕ ಮತ್ತು ಮಾಲೀಕರ ಸಂಘದ ಉಪಾಧ್ಯಕ್ಷ ಕಿರಣ್ ಡಿಸಿಲ್ವಾ,ಕಾರ್ಯದರ್ಶಿ ಶಶ್ವರಾಜ್,ಜೊತೆ ಕಾರ್ಯದರ್ಶಿ ಗುರುಕಿರಣ್ ಶೆಟ್ಟಿ,ಮಾಜಿ ಅಧ್ಯಕ್ಷ ಯೋಗೀಶ್ ಅರಾಟೆ ಹಾಗೂ ಸರ್ವ ಸದಸ್ಯರು,ಸಂಜೀವಿನಿ ಸಂಘದ ಸದಸ್ಯರು,ಸ್ಥಳೀಯರು ಉಪಸ್ಥಿತರಿದ್ದರು.ರಮೇಶ್ ಆಚಾರ್ಯ ಅರಾಟೆ ಸ್ವಾಗತಿಸಿ,ವಂದಿಸಿದರು.ಶAಕರನಾಗ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.
(ಮುಳ್ಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ ಶಂಕರನಾಗ್ ರಿಕ್ಷಾ ನಿಲ್ದಾಣವನ್ನು,
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು)
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…