ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.ಬಿಜೆಪಿ ಪಕ್ಷದ ಬೆಂಬಲಿತ ಇನ್ನೋರ್ವ ಪಂಚಾಯತ್ ಸದಸ್ಯ ಹಾಲಿ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷಗಾದೆಗೆ ಹಂಬಲವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಆಗಬೇಕಾಗಿದ್ದ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ತೀವೃವಾಗಿ ಕೂತುಹಲ ಮೂಡಿಸಿದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರಿಂದ ನಡೆದ ಅಡ್ಡ ಮತದಾನ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಪಕ್ಷದ ಸದಸ್ಯನನ್ನು ಬೆಂಬಲಿಸಿದ್ದರಿಂದ ಇಬ್ಬರೂ ಅಭ್ಯರ್ಥಿಗಳು 7 ಸಮಬಲದ ಮತವನ್ನು ಪಡೆದಿದ್ದಾರ್ದೆ.ಅದೃಷ್ಟದ ಚೀಟಿಯನ್ನು ಎತ್ತಿದ್ದಾಗ ಪಂಚಾಯತ್‍ನ ಹಾಲಿ ಉಪಾಧ್ಯಕ್ಷರಾದ ಲೋಕೇಶ್ ಖಾರ್ವಿ ಅವರು ಮರವಂತೆ ಪಂಚಾಯತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರೂ ಮತದಾನದಲ್ಲಿ ಸೋಲನ್ನು ಕಂಡಿದ್ದಾರೆ.ಅದೃಷ್ಟದ ಚೀಟಿಯಲ್ಲಿ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಲಕ್ ಖುಲಾಯಿಸಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…