ಪ್ರಮುಖ

ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಒಲಿದ ಅಧ್ಯಕ್ಷ ಸ್ಥಾನ

Share

ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.ಬಿಜೆಪಿ ಪಕ್ಷದ ಬೆಂಬಲಿತ ಇನ್ನೋರ್ವ ಪಂಚಾಯತ್ ಸದಸ್ಯ ಹಾಲಿ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷಗಾದೆಗೆ ಹಂಬಲವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಆಗಬೇಕಾಗಿದ್ದ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ತೀವೃವಾಗಿ ಕೂತುಹಲ ಮೂಡಿಸಿದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರಿಂದ ನಡೆದ ಅಡ್ಡ ಮತದಾನ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಪಕ್ಷದ ಸದಸ್ಯನನ್ನು ಬೆಂಬಲಿಸಿದ್ದರಿಂದ ಇಬ್ಬರೂ ಅಭ್ಯರ್ಥಿಗಳು 7 ಸಮಬಲದ ಮತವನ್ನು ಪಡೆದಿದ್ದಾರ್ದೆ.ಅದೃಷ್ಟದ ಚೀಟಿಯನ್ನು ಎತ್ತಿದ್ದಾಗ ಪಂಚಾಯತ್‍ನ ಹಾಲಿ ಉಪಾಧ್ಯಕ್ಷರಾದ ಲೋಕೇಶ್ ಖಾರ್ವಿ ಅವರು ಮರವಂತೆ ಪಂಚಾಯತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರೂ ಮತದಾನದಲ್ಲಿ ಸೋಲನ್ನು ಕಂಡಿದ್ದಾರೆ.ಅದೃಷ್ಟದ ಚೀಟಿಯಲ್ಲಿ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಲಕ್ ಖುಲಾಯಿಸಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago