ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.
ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ್ ಮತ್ತು ಸದಸ್ಯರು,ಅರ್ಚಕರು,ಉಪಾದಿವಂತರು,ನೌಕರ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
(ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಭಕ್ತರು ಸಮುದ್ರ ಸ್ನಾನ ಮಾಡಿ ಸೌಪರ್ಣಿಕಾ ನದಿಯಲ್ಲಿ ತೀರ್ಥ ಪ್ರೋಕ್ಷಣೆಮಾಡಿಕೊಂಡ ನಂತರ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವರು ಮತ್ತು ಶ್ರೀ ಗಂಗಾರಧಾರೇಶ್ವರ ಸ್ವಾಮಿ ದರ್ಶನ ಪಡೆದು ಪೂಜೆಯನ್ನು ಸಲ್ಲಿಸಿದರು.ದಿನವಿಡಿ ಬಿಸಿಲಿನಿಂದ ಕೂಡಿದ ವಾತಾವರಣ ಕಂಡು ಬಂದಿದ್ದರಿಂದ ಮರವಂತೆ ಜಾತ್ರೆಗೆ ಭಕ್ತ ಸಮುಹವೆ ಹರಿದು ಬಂದಿದೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…