ಬಿಜೆಪಿಗೆ ಒಲಿದ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ

ಕುಂದಾಪುರ:ತ್ರಾಸಿ ಗ್ರಾಮ ಪಂಚಾಯತ್‍ನಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯ ಮಿಥುನ್ ದೇವಾಡಿಗ ತ್ರಾಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯೆ ಹೇಮಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
06 ಜನ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ 02 ಜನ ಬಿಜೆಪಿ ಪಕ್ಷದ ಸದಸ್ಯರು ಸೇರಿ ಒಟ್ಟು ತ್ರಾಸಿ ಗ್ರಾಮ ಪಂಚಾಯತ್‍ನಲ್ಲಿ 08 ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜು ಮೆಂಡನ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ಮಿಥುನ್ ದೇವಾಡಿಗ ಸ್ಪರ್ಧೆ ಮಾಡಿದ್ದರು.ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಅಡ್ಡ ಮತದಾನ ಮಾಡಿದ್ದರಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಮಿಥುನ್ ದೇವಾಡಿಗ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ 4 ಮತಗಳನ್ನು ಪಡೆದು,ರಾಜು ಮೆಂಡನ್ ಜತೆ ಸಮಲದ ಹೋರಾಟವನ್ನು ನೀಡಿದ್ದಾರೆ.ಅದೃಷ್ಟದ ಚೀಟಿಯಲ್ಲಿ ಲಕ್ ಖುಲಾಯಿಸಿದ್ದರಿಂದ ಪ್ರಥಮ ಬಾರಿಗೆ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮಿಥುನ್ ದೇವಾಡಿಗ ಅವರು ತ್ರಾಸಿ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ರಾಜು ದೇವಾಡಿಗ ತ್ರಾಸಿ ಅವರ ಕಾಲದಿಂದಲೂ ಕೈವಶವಾಗಿದ್ದ ತ್ರಾಸಿ ಗ್ರಾಮ ಪಂಚಾಯತಿಯ ಆಡಳಿತ ಮೊದಲ ಬಾರಿಗೆ ಬಿಜೆಪಿ ಪಕ್ಷದ ಪಾಲಾಗಿದೆ.