ಬೈಂದೂರು:ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಬಂಧಿಸಿರುದ್ದನ್ನು ಖಂಡಿಸಿ ಬೈಂದೂರು ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ಬೈಂದೂರು ಅಂಡರ್ ಪಾಸ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು.
ಬೈಂದೂರು ತಾಲೂಕು ಸಹ ಸಂಚಾಲಕ ಹರೀಶ್ ಸೇಳ್ಕೋಡ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,
ಇಂದಿನ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂ ಸಂಘಟನೆಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಹಿಂದೂ ಸಂಘಟನೆಗಳ ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ,ಹಿಂದೂ ವಿರೋಧಿ ನೀತಿ ಮುಂದುವರಿಸಿದರೆ ಕಾಂಗ್ರೆಸ್ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭಟನೆಗಳು ತಾಲೂಕಿನಾದ್ಯಂತ ನಡೆಸಲಾಗುತ್ತದೆ ಎಂದು ಹೇಳಿದರು.
ಹಿಂಜಾವೇ ಜಿಲ್ಲಾ ಸಂಚಾಲಕ ಶಂಕರ ಕೋಟ,ಜಿಲ್ಲಾ ಸಹ ಸಂಚಾಲಕ -ನವೀನ್ ಗಂಗೊಳ್ಳಿ, ವಾಸುದೇವ ಗಂಗೊಳ್ಳಿ, ಗೋಪಾಲ್ ವಸ್ರೆ,ಮಹೇಶ್ ,ರತ್ನಾಕರ ಗಂಗೊಳ್ಳಿ, ತಾಲೂಕು ಸಂಚಾಲಕ -ರಾಜೇಶ್ ಬೈಂದೂರು,ರಾಜೇಶ್ ಮೂಡನಗೆದ್ದೆ,ಮಹೇಶ್ ಬೈಂದೂರು,ವಿಶ್ವ ಹಿಂದೂ ಪರಿಷತ್ತಿನ ಸುಧಾಕರ್ ಶೆಟ್ಟಿ,
ರಾಮ ಸೇನೆಯ ಸುಬ್ರಹ್ಮಣ್ಯ ಕಿರುಮಂಜೇಶ್ವರ,ಬಿಜೆಪಿ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ,ಶರತ್ ಶೆಟ್ಟಿ ಹಾಗೂ ಬೈಂದೂರು ತಾಲೂಕಿನ ಹಿಂಜಾವೇ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…