ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.
ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ ಕೆಲಸಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈ ಹಾಕಿ ಯಶಸ್ಸನ್ನು ಸಾಧಿಸಿರುವುದು ವಿಶ್ವವು ಭಾರತದ ಸಾಧನೆಯನ್ನು ಬೆರಗು ಗಣ್ಣಿನಿಂದ ನೋಡುವಂತೆ ಆಗಿದೆ.
(ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ನಾಗರಿಕರು ಪಟಾಕಿ ಸಿಡಿಸಿ,ಸಿಹಿತಿಂಡಿ ಹಂಚಿ,ದೇಶಭಕ್ತಿ ಮೊಳಗಿಸಿ ಸಂಭ್ರಮಾಚರಣೆಯನ್ನು ಮಾಡಿದರು)
(ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿಯಲ್ಲಿ ಮೋದಿ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…