ಅಕ್ರಮ ಮರಳು ಸಾಗಾಟ:ಮೂರು ಟಿಪ್ಪರ್ ವಶಕ್ಕೆ
ಉಡುಪಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಜರುಗಿಸಬೇಕೆನ್ನುವುದು ನಾಗರಿಕರ ಆಗ್ರಹವಾಗಿದೆ.

ಗಂಗೊಳ್ಳಿ:ಯಾವುದೇ ರೀತಿ ಪರವಾನಾಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಕುಂದಾಪುರ ತಾಲೂಕಿನ ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಹೇರಿಕೊಂಡು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂದಿನ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಕೋರಿಕೆ ಪತ್ರವನ್ನು ಸಲ್ಲಿಸಿದ್ದಾರೆ.ಕುಂದಾಪುರ ಮತ್ತು ಬೈಂದೂರು ಭಾಗದ ಪ್ರದೇಶಗಳ ನದಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































