ಗಾಯನೋತ್ಸವ ಕಾರ್ಯಕ್ರಮ ಉದ್ಘಾಟನೆ
ಕುಂದಾಪುರ:ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಿಕ್ಷಕರ ಸಂಘ ಬೈಂದೂರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘ ಬೈಂದೂರು ವತಿಯಿಂದ ಗಾಯನೋತ್ಸವ ಕಾರ್ಯಕ್ರಮ ನಾವುಂದ ಸ್ಕಂದಾ ಹಾಲ್‍ನಲ್ಲಿ ನಡೆಯಿತು.
ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕ್ಷೇತ್ರ ಶಿಕ್ಷಣಾಕಾರಿ ನಾಗೇಶ ಉದ್ಘಾಟಿಸಿದರು.ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್,ಸಮನ್ವಯಾಕಾರಿ ಮಂಜುನಾಥ ನಾಯ್ಕ,ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ಮಾದವ ಬಿಲ್ಲವ,ದಯಾನಂದ ಬಳಗಾರ್ ಉಪಸ್ಥಿತರಿದ್ದರು.ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಸ್ವಾಗತಿಸಿದರು.ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ನಿರೂಪಿಸಿದರು.ಖಜಾಂಚಿ ಅಚ್ಚುತ್ ಬಿಲ್ಲವ ವಂದಿಸಿದರು.ಶಿಕ್ಷಕರು ಗಾಯನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.



















































































































































































































































































































































































































































































































































































































































































































































































































































































































































































































































































































































































































































































































































































































































































