ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ- ಶಿಕ್ಷಕರ ಸಭೆ

Share

Advertisement
Advertisement
Advertisement

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾತನಾಡಿ, ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ ಅವರು ವಿದ್ಯಾರ್ಥಿ ಪೋಷಕರನ್ನು ಉದ್ದೇಶಿಸಿ ಮಾತನಾಡಿ,ಮಕ್ಕಳ ಮನಸ್ಥಿತಿಯನ್ನು ಪೋಷಕರು ಅರ್ಥೈಸಿಕೊಂಡು ಪ್ರೋತ್ಸಾಹ ನೀಡಬೇಕು ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು.ಆ ನಿಟ್ಟಿನಲ್ಲಿ ಜನತಾ ಕಾಲೇಜಿನ ಕಾರ್ಯ ಶ್ಲಾಘನೀಯ ಎಂದು ಹೇಳಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ವಿತರಿಸಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page