ಮುಳ್ಳಿಕಟ್ಟೆ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಕಾಳಿಕಾಂಬಾ ನಗರದ ನಿವಾಸಿ ಶಂಕರ ಆಚಾರ್ಯ ಮತ್ತು ಸುಶೀಲ ಆಚಾರ್ಯ ದಂಪತಿಗಳ ಪುತ್ರ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಲ್ಲಿ ಚಂಡೆಯೊಂದಿಗೆ ಆರತಿ ಬೆಳಗಿ ಅದ್ದೂರಿಯಾಗಿ ಮಂಗಳವಾರ ಸ್ವಾಗತಿಸಿಕೊಳ್ಳಲಾಯಿತು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಶಂಕರನಾಗ ಆಟೋ ಸ್ಟ್ಯಾಂಡ್ ಮುಳ್ಳಿಕಟ್ಟೆ ಮತ್ತು ಹೊಸಾಡು ಗ್ರಾಮಸ್ಥರ ವತಿಯಿಂದ ಮುಳ್ಳಿಕಟ್ಟೆ ಆಟೋ ಸ್ಟ್ಯಾಂಡ್‍ನಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಶಂಕರನಾಗ ಆಟೋ ಸ್ಟ್ಯಾಂಡ್ ಅಧ್ಯಕ್ಷ ಚಂದ್ರ ಹಕ್ಲಾಡಿ ಮತ್ತು ಪದಾಧಿಕಾರಿಗಳು,ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
(ಭಾರತೀಯ ಭೂ ಸೇನೆಯಲ್ಲಿ 21 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಿಂದ ಹುಟ್ಟೂರಾದ ಆಲೂರು ತನಕ ಭವ್ಯ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು)
ಕುಂದಾಪುರ:ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೆಷನ್ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು…
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…