ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದರು.
ಬಿಜೆಪಿ ಪಕ್ಷದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ಕರಾವಳಿ ಭಾಗದಲ್ಲಿ ತೀವೃ ಕುತೂಹಲ ಮೂಡಿಸಿದೆ.2023 ರ ವಿಧಾನ ಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಪಕ್ಷದ ಹೈಕಾಮಾಂಡ್ ಟಿಕೆಟ್ ನಿರಾಕರಿಸಿ ಸಂಘದ ನಿಷ್ಠಾವಂತ ಕಾರ್ಯಕರ್ತ ಗುರುರಾಜ್ ಗಂಟಿಹೊಳೆಗೆ ನೀಡಿದ್ದರು.ಎಂಎಲ್‍ಎ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಪಕ್ಷದ ಅಭ್ಯರ್ಥಿ ಪರ ಚುನಾವಣೆ ಪ್ರಚಾರಕ್ಕೆ ತೆರಳದೆ ತಟಸ್ಥ ನಿಲುವನ್ನು ತಾಳಿದ್ದರು.ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ಅಂತರವನ್ನು ಕಾಯ್ದು ಕೊಂಡಿದ್ದ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಕ್ಷೇತ್ರಾದ್ಯಂತ ಸುದ್ದಿ ಆಗಿತ್ತು.ಕೆಪಿಸಿಸಿ ಅಧ್ಯಕ್ಷರನ್ನು ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಭೇಟಿ ಮಾಡಿರುವುದು ಆಪರೇಷನ್ ಹಸ್ತಕ್ಕೆ ಪುಷ್ಟಿ ನೀಡಿದೆ.ಲೋಕಾಸಭೆ ಚುನಾವಣೆ ಹತ್ತಿರ ವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿರುವುದು ಬಿಜೆಪಿ ಪಕ್ಷಕ್ಕೆ ಸಂಕಷ್ಟವನ್ನು ತಂದೊಡ್ಡಿದೆ.ಆಪರೇಷನ್ ಹಸ್ತ ಕರಾವಳಿ ಭಾಗದಿಂದ ಆರಂಭವಾಗುವ ಸಂಶಯ ರಾಜ್ಯ ರಾಜಕಾರಣದಲ್ಲಿ ಗೋಚರವಾದಂತ್ತಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…