ಕುಂದಾಪುರ

ಬಿಜೆಪಿ ಪಕ್ಷದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

Share

ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದರು.
ಬಿಜೆಪಿ ಪಕ್ಷದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ಕರಾವಳಿ ಭಾಗದಲ್ಲಿ ತೀವೃ ಕುತೂಹಲ ಮೂಡಿಸಿದೆ.2023 ರ ವಿಧಾನ ಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಪಕ್ಷದ ಹೈಕಾಮಾಂಡ್ ಟಿಕೆಟ್ ನಿರಾಕರಿಸಿ ಸಂಘದ ನಿಷ್ಠಾವಂತ ಕಾರ್ಯಕರ್ತ ಗುರುರಾಜ್ ಗಂಟಿಹೊಳೆಗೆ ನೀಡಿದ್ದರು.ಎಂಎಲ್‍ಎ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಪಕ್ಷದ ಅಭ್ಯರ್ಥಿ ಪರ ಚುನಾವಣೆ ಪ್ರಚಾರಕ್ಕೆ ತೆರಳದೆ ತಟಸ್ಥ ನಿಲುವನ್ನು ತಾಳಿದ್ದರು.ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ಅಂತರವನ್ನು ಕಾಯ್ದು ಕೊಂಡಿದ್ದ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಕ್ಷೇತ್ರಾದ್ಯಂತ ಸುದ್ದಿ ಆಗಿತ್ತು.ಕೆಪಿಸಿಸಿ ಅಧ್ಯಕ್ಷರನ್ನು ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಭೇಟಿ ಮಾಡಿರುವುದು ಆಪರೇಷನ್ ಹಸ್ತಕ್ಕೆ ಪುಷ್ಟಿ ನೀಡಿದೆ.ಲೋಕಾಸಭೆ ಚುನಾವಣೆ ಹತ್ತಿರ ವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿರುವುದು ಬಿಜೆಪಿ ಪಕ್ಷಕ್ಕೆ ಸಂಕಷ್ಟವನ್ನು ತಂದೊಡ್ಡಿದೆ.ಆಪರೇಷನ್ ಹಸ್ತ ಕರಾವಳಿ ಭಾಗದಿಂದ ಆರಂಭವಾಗುವ ಸಂಶಯ ರಾಜ್ಯ ರಾಜಕಾರಣದಲ್ಲಿ ಗೋಚರವಾದಂತ್ತಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago